ಬಳ್ಳಾರಿ: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರಿದಿದೆ.
ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಮಯ್ಯ ಬಾಣಂತಿ ಮೃತಪಟ್ಟಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯಾದ ಬಳಿಕ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಹಿಳೆ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದ ಸುಮಯ್ಯ ಆರೋಗ್ಯ ಸ್ಥಿತಿ ನಿನ್ನೆಯಿಂದ ಮತ್ತೆ ಗಂಭೀರವಾಗಿತ್ತು. ಜಿಲ್ಲಾಸ್ಪತ್ರೆ ಹಾಗೂ ಬಿಮ್ಸ್ ಸೇರಿ ಇದುವರೆಗೆ ಜಿಲ್ಲೆಯಲ್ಲಿ 6 ಬಾಣಂತಿಯರು ಸಾವನ್ನಪ್ಪಿದ್ದಾರೆ.