ನವದೆಹಲಿ: ಯೋಗ ಗುರು ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ವಿರುದ್ಧದ ಅವರಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ.

ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ಕೈಬಿಟ್ಟಿರುವುದಾಗಿ ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ಆದೇಶ ಉಲ್ಲಂಘಿಸಿ ಯಾವುದೇ ನಿರ್ಧಾರ ಕೈಗೊಂಡರೇ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಪತಂಜಲಿ ಎಂಡಿ ಆಚಾರ್ಯ ಬಾಲಕೃಷ್ಣ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಮುಕ್ತಾಯಗೊಳಿಸಿದೆ.