ಬಾಯಿಗೆ ಬೀಗ ಹಾಕಿ ಇಲ್ಲದಿದ್ದರೆ ನೋಟಿಸ್

0
11

ಬೆಂಗಳೂರು: ಸಿಎಂ-ಡಿಸಿಎಂ ವಿಚಾರವಾಗಿ ಬಹಿರಂಗ ಚರ್ಚೆ ಬೇಡ. ನಿಮ್ಮ ಬಾಯಿಗೆ ಬೀಗ ಹಾಕಿ, ಇಲ್ಲದಿದ್ದರೆ ಪಕ್ಷದಿಂದ ನೋಟಿಸ್ ಜಾರಿ ಮಾಡಬೇಕಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಸದಾಶಿವ ನಗರ ನಿವಾಸದ ಬಳಿ ಮಾತನಾಡಿದ ಅವರು, ಪಕ್ಷವನ್ನು ಎಷ್ಟು ಕಷ್ಟಪಟ್ಟು ಅಧಿಕಾರಕ್ಕೆ ತಂದಿದ್ದೇವೆ. ಸಿಎಂ-ಡಿಸಿಎಂ ವಿಚಾರವಾಗಿ ಬಹಿರಂಗ ಚರ್ಚೆ ಬೇಡ. ನಿಮ್ಮ ಬಾಯಿಗೆ ಬೀಗ ಹಾಕಿ, ಇಲ್ಲದಿದ್ದರೆ ಪಕ್ಷದಿಂದ ನೋಟಿಸ್ ಜಾರಿ ಮಾಡಬೇಕಾಗುತ್ತದೆ. ನನಗೆ ಯಾರ ಶಿಫಾರಸು ಬೇಡ ಆಶೀರ್ವಾದ ಸಾಕು ಎಂದು ತಿಳಿಸಿದರು.
ರಾಜಕಾರಣದ ಸುದ್ದಿಗೆ ನೀವು ಬರಲು ಹೋಗಬೇಡಿ. ಎಲ್ಲಾ ಸ್ವಾಮೀಜಿಗಳಿಗೂ ಕೈ ಮುಗಿಯುವೆ. ಚಂದ್ರಶೇಖರ್ ಸ್ವಾಮೀಜಿ ನನ್ನ ಮೇಲಿನ ಅಭಿಮಾನದಿಂದ ಮಾತನಾಡಿದ್ದಾರೆ. ಡಿಸಿಎಂ ಹಾಗೂ ಸಿಎಂ ಗೊಂದಲ ವಿಚಾರವಾಗಿ ಪ್ರತಿಕ್ರಿಯಿಸಿ, ಯಾವ ಡಿಸಿಎಂ ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ. ಯಾವ ರೆಕಮಂಡೇಷನ್ ಕೂಡ ಅವಶ್ಯಕತೆ ಇಲ್ಲ. ನಾನು ಖರ್ಗೆ ಹಾಗೂ ಸಿದ್ದರಾಮಯ್ಯ ಕೂತು ಪಕ್ಷದ ಹಿತದೃಷ್ಟಿಯಿಂದ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಯಾವ ಎಂಎಲ್‌ಎ ಕೂಡ ಮಾತನಾಡುವ ಅವಶ್ಯಕತೆ ಇಲ್ಲ. ಹಾಗೊಮ್ಮೆ ಮಾತನಾಡಿದರೆ ಎಐಸಿಸಿಯವರು ನಾನೂ ವಿಧಿಯಿಲ್ಲದೇ ನೋಟಿಸ್ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Previous articleಮುಖ್ಯಮಂತ್ರಿ ಕುರ್ಚಿ ಮಾರಾಟದ ವಸ್ತುವಲ್ಲ
Next articleವಂದೇ ಭಾರತ್ ಟಿಕೆಟ್ ದರ ಪರಿಷ್ಕರಣೆ