ಬಾರ್ಕೂರು ರೈಲ್ವೆ ನಿಲ್ದಾಣಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ

0
38

ಬ್ರಹ್ಮಾವರ: ಬಾರ್ಕೂರು ರೈಲು ನಿಲ್ದಾಣಕ್ಕೆ ಹೊಸ ಪ್ಲಾಟ್ ಫಾರಂ, ಲೂಪ್ ಲೈನ್, ಮಲ್ಸೇತುವೆ ನಿರ್ಮಾಣಕ್ಕೆ ಅಂದಾಜು ಪಟ್ಟಿ ತಯಾರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಸಾರ್ವಜನಿಕರಿಂದ ದೂರು ಬಂದಿದ್ದು, ಬಾರ್ಕೂರು ರೈಲ್ವೆ ಹಿತರಕ್ಷಣಾ ಸಮಿತಿಯ ಮನವಿಯ ಮೇರೆಗೆ ಸಂಸದ ಶ್ರೀನಿವಾಸ ಪೂಜಾರಿ ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚಿಸಿ ಹೊಸ ಪ್ಲಾಟ್ ಫಾರಂ, ಲೂಪ್ ಲೈನ್, ಮಲ್ಲೇತುವೆ ನಿರ್ಮಾಣಕ್ಕೆ ಅಂದಾಜು ಪಟ್ಟಿ ತಯಾರಿಸುವಂತೆ ಸೂಚಿಸಿಲಾಗಿದೆ ಬಾರ್ಕೂರು ರೈಲು ನಿಲ್ದಾಣದಲ್ಲಿ ಒಂದೇ ಪ್ಲಾಟ್ ಫಾರ್ಮ್ ಇರುವುದರಿಂದ ಮುಂಬೈಯಿಂದ ಬರುವ ಮತ್ತ್ವಗಂಧ ಎಕ್ಸ್‌ಪ್ರೆಸ್ ರೈಲಿನ ಕ್ರಾಸಿಂಗ್ ಸಂದರ್ಭದಲ್ಲಿ ಸಮಸ್ಯೆ ಆಗುತ್ತಿದ್ದು, ರೈಲ್ವೆ ಅಧಿಕಾರಿಗಳೊಂದಿಗೆ ಬಾರ್ಕೂರು ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿ ಹೊಸ ಪ್ಲಾಟ್ ಫಾರಂ,ಲೂಪ್ ಲೈನ್, ಮಲ್ಸೇತುವೆ ನಿರ್ಮಾಣಕ್ಕೆ ಅಂದಾಜು ಪಟ್ಟಿ ತಯಾರಿಸಲು ಅಧಿಕಾರಿಗಳಿಗೆ ಸೂಚಿಸಿಲಾಗಿದೆ ಎಂದಿದ್ದಾರೆ.

Previous articleಲೋಕಕ್ಕೆ ಜಲ ವಾಯು ಗಂಡಾಂತರ: ಕೋಡಿಶ್ರೀ ಭವಿಷ್ಯ
Next articleಬಾಲಿವುಡ್‌‌ ಖ್ಯಾತ ನಟ ಮುಕುಲ್‌ ದೇವ್‌ ನಿಧನ