ಬಾಲಕಿಗೆ ಲೈಂಗಿಕ ಕಿರುಕುಳ: ತ್ವರಿತ ಕ್ರಮಕ್ಕೆ ಸಚಿವೆ ಹೆಬ್ಬಾಳಕರ್ ಸೂಚನೆ

0
17

ಬೆಳಗಾವಿ : ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದಾರೆ.
ಅಪಘಾತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಘಟನೆಯ ಮಾಹಿತಿ ಬಂದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಘಟನೆಯ ವಿವರ ಪಡೆದರು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ತಕ್ಷಣ ಪತ್ತೆ ಹಚ್ಚಬೇಕು. ಜೊತೆಗೆ, ಬಾಲಕಿಗೆ ಅಗತ್ಯವಾದ ಎಲ್ಲ ನೆರವನ್ನು ನೀಡಬೇಕು ಎಂದು ಸಚಿವರು ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ಸೂಚನೆ ನೀಡಿದ್ದಾರೆ, ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಸೂಚನೆ ನೀಡಲಾಗಿದ್ದು, ಘಟನೆಯ ಮಾಹಿತಿ ಬಂದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಘಟನೆಯ ವಿವರ ಪಡೆದಿದ್ದೇನೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ತಕ್ಷಣ ಪತ್ತೆ ಹಚ್ಚಬೇಕು. ಜೊತೆಗೆ, ಬಾಲಕಿಗೆ ಅಗತ್ಯವಾದ ಎಲ್ಲ ನೆರವನ್ನು ನೀಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

Previous articleವಿಧಾನ ಸಭೆ ಸಚಿವಾಲಯದಲ್ಲಿ ಪುಸ್ತಕ ಮೇಳ
Next articleಲಾಯರ್ ಜಗದೀಶ್, ಗನ್‌ಮ್ಯಾನ್ ಬಂಧನ