Home ಅಪರಾಧ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಅಂಗಡಿಗೆ ಬೆಂಕಿ

ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಅಂಗಡಿಗೆ ಬೆಂಕಿ

0

ಮಂಗಳೂರು: ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಅಂಗಡಿhಗೆ ಬೆಂಕಿ ಹಚ್ಚಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ.
ಕೆಲವು ದಿನಗಳ ಹಿಂದೆ ಕುದ್ದುಪದವು ನಿವಾಸಿ ಅಶ್ರಫ್ ಎಂಬಾತ ಅಂಗಡಿಗೆ ತೆರಳಿದ್ದ ಬಾಲಕಿಗೆ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿತ್ತು. ಈ ಬಗ್ಗೆ
ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಅಶ್ರಫ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೇವಲ ಒಂದು ವಾರದಲ್ಲಿ ಆರೋಪಿಗೆ ಜಾಮೀನು ಮಂಜೂರಾಗಿತ್ತು.
ಇದೀಗ ಆರೋಪಿ ಅಶ್ರಫ್‌ನ ಗೂಡಂಗಡಿಗೆ ಯಾರೋ ಕಿಡಿಗೇಡಿಗಳು ಶುಕ್ರವಾರ ತಡರಾತ್ರಿ ಬೆಂಕಿ ಹಚ್ಚಿದ್ದಾರೆ. ತಡರಾತ್ರಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆ ದಾರಿಯಾಗಿ ಸಾಗುತ್ತಿದ್ದ ವಾಹನ ಚಾಲಕರು ಇದನ್ನು ಗಮನಿಸಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version