ಬಾಲಕಿ ಹತ್ಯೆ ಪ್ರಕರಣ: ಆರೋಪಿಗೆ ಗುಂಡು

0
21

ಹುಬ್ಬಳ್ಳಿ: ಐದು ವರ್ಷದ ಬಾಲಕಿಯನ್ನ ಅಪಹರಣ ಮಾಡಿ ಹತ್ಯೆ ಮಾಡಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾದ ಘಟನೆ ನಡೆದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಮೆಚ್ಚುಗೆಗೆ ಕಾರಣವಾಗಿದೆ.
ಕೊಲೆಯಾದ ಬಾಲಕಿ ಸಂತೋಷನಗರದವಳಾಗಿದ್ದು, ಘಟನೆ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ ನಡೆದಿತ್ತು.
ಕೃತ್ಯ ನಡೆದಿದ್ದು ಹೇಗೆ?: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ದಂಪತಿ ಹುಬ್ಬಳ್ಳಿಯಲ್ಲಿ ವಾಸ ಮಾಡುತ್ತಿದ್ದರು. ತಾಯಿ ಮನೆ ಕೆಲಸಕ್ಕೆ ವಿಜಯನಗರ ಬಡಾವಣೆಗೆ ಹೋದಾಗ ಮಗಳನ್ನೂ ಕರೆದುಕೊಂಡು ಹೋಗಿದ್ದಳು. ತಾಯಿ ಮನೆಯ ಒಳಗಡೆ ಕೆಲಸ ಮಾಡುತ್ತಿದ್ದಾಗ ಆಕೆಯ ಮಗಳು ಮನೆಯ ಮುಂದಿನ ಆವರಣದಲ್ಲಿ ಆಟವಾಡಿಕೊಂಡಿದ್ದಳು. ಈ ವೇಳೆ ಮಗುವಿನ ಚಲನವಲನ ಗಮನಿಸಿದ ಅಪರಿಚಿತ ವ್ಯಕ್ತಿ ಅಪಹರಿಸಿಕೊಂಡು ಹೋಗಿ ನಿರ್ಮಾಣ ಹಂತದ ಕಟ್ಟಡದ ಶೌಚಾಲಯದಲ್ಲಿ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಆರೋಪಿಯು ಬಾಲಕಿಯನ್ನು ಅಪಹರಿಸಿ ನಿರ್ಮಾಣ ಹಂತದ ಕಟ್ಟಡದ ಶೌಚಾಲಯದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಕಿರುಚಾಡಿದಾಗ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.
ಘಟನೆಯ ಬಳಿಕ ನೂರಾರು ಜನರು ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂಬ ಆಗ್ರಹಿಸಿದ ಕೆಲವೇ ಗಂಟೆಗಳಲ್ಲಿ ಆರೋಪಿ ಸಾವಿಗೀಡಾಗಿದ್ದಾನೆ.

Previous articleಚಿಕ್ಕೋಡಿ: ತಾಯಿ-ಮಗನ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿ
Next articleಅರಣ್ಯ ಇಲಾಖೆ ಕ್ರಮದ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ