ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳು ಚಾಕು ಇರಿದ ಘಟನೆ ಜರುಗಿದೆ.
ಆರು ಕಡೆಗಳಲ್ಲಿ ಗಂಭೀರ ಗಾಯಗಳಾಗಿದ್ದು ಅವರನ್ನು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುಂಬೈನ ಬಾಂದ್ರಾ ನಿವಾಸದಲ್ಲಿ ಈ ದಾಳಿ ನಡೆದಿದ್ದು, ಮನೆಗಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಯೊಬ್ಬ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ಚಾಕುವಿನಿಂದ ಹಲವು ಬಾರಿ ಇರಿದಿದ್ದಾನೆ, ಮನೆಯಲ್ಲಿದ್ದವರು ಎಚ್ಚರಗೊಂಡ ನಂತರ ದರೋಡೆಕೋರ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗಿನ ಜಾವ ಮೂರು ಗಂಟೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಲೀಲಾವತಿ ಅಸ್ಪತ್ರೆಯ ನುರಿತ ವೈದ್ಯರ ತಂಡ ಶಸ್ತ್ರಚಿಕಿತ್ಸೆ ನಡೆಸುತ್ತಿದೆ. ಬೆಳಗ್ಗೆ 5.30ರಿಂದಲೇ ಶಸ್ತ್ರಚಿಕಿತ್ಸ ನಡೆಸಲಾಗುತ್ತಿದೆ ಎನ್ನಲಾಗಿದೆ. ಸೈಫ್ ಅಲಿ ಖಾನ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.