Home ನಮ್ಮ ಜಿಲ್ಲೆ ಕೊಪ್ಪಳ ಬಾವಿಗೆ ಬಿದ್ದಿದ್ದ ವ್ಯಕ್ತಿ ರಕ್ಷಣೆ

ಬಾವಿಗೆ ಬಿದ್ದಿದ್ದ ವ್ಯಕ್ತಿ ರಕ್ಷಣೆ

0

ಕುಷ್ಟಗಿ: ಪಟ್ಟಣದ ಸರ್ಕಾರಿ ಆಸ್ಪತ್ರೆ ಪಕ್ಕದಲ್ಲಿದ್ದ ಬಾವಿಗೆ ಬಿದ್ದಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ.
ಇಳಕಲ್ ಮೂಲದ ಮಾನಸಿಕ ಅಸ್ವಸ್ಥ ಗಂಗಾಧರ ನಾಗಪ್ಪ ಅಂಗಡಿ ಎಂಬಾತನನ್ನು ರಕ್ಷಿಸಲಾಗಿದೆ. ಈತ ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದು ರಾತ್ರಿ ಸಮಯದಲ್ಲಿ ಆಸ್ಪತ್ರೆಯಿಂದ ಹೊರಗೆ ಬಂದಿದ್ದು, ಬಾವಿಯಲ್ಲಿ ಬಿದ್ದಿದ್ದಾನೆ ಎನ್ನಲಾಗಿದೆ. ಬಾವಿಗೆ ಬಿದ್ದ ತಕ್ಷಣ ಗಂಗಾಧರ ಕೂಗಿದ್ದಾನೆ. ಆತನ ಧ್ವನಿ ಕೇಳಿ ಸ್ಥಳಕ್ಕೆ ಆಗಮಿಸಿದ ಜನ ಕೂಡಲೇ ಅಗ್ನಿಶಾಮಕದಳಕ್ಕೆ ಕರೆ ಮಾಡಿದ್ದು ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಆತನನ್ನು ರಕ್ಷಿಸಿದ್ದಾರೆ.

Exit mobile version