Home ನಮ್ಮ ಜಿಲ್ಲೆ ಉತ್ತರ ಕನ್ನಡ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

0

ಕಾರವಾರ: ಬಾವಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಬೆಳಕೆಯ ಕಟಗೇರಿಯ ದೀಕ್ಷಾ ನಾಯ್ಕ (22) ಮೃತ ದುರ್ದೈವಿ. ದೀಕ್ಷಾ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಎಂದಿನಂತೆ ಬೆಳಗ್ಗೆ ಕಾಲೇಜಿ ಹೋಗಿ ಮನೆಗೆ ಬಂದಿದ್ದಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗಳು ಕಾಣದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಕಡೆಗೆ ಅನುಮಾನಗೊಂಡು ಬಾವಿಯಲ್ಲಿ ನೋಡಿದಾಗ ಮೃತದೇಹವು ಪತ್ತೆಯಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀರಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version