ಬಾವಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

0
16

ಉಳ್ಳಾಲ: ಮನೆಯೊಡತಿ ವೃದ್ಧೆಯ ಮೃತದೇಹವು ಮನೆಯಂಗಳದ ಬಾವಿಯಲ್ಲಿ ಪತ್ತೆಯಾದ ಘಟನೆ ಸೋಮವಾರ ಬೆಳಿಗ್ಗೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ, ಕುಜುಮಗದ್ದೆಯಲ್ಲಿ ನಡೆದಿದೆ.
ಕೊಲ್ಯ, ಕುಜುಮಗದ್ದೆ ನಿವಾಸಿ ವಾರಿಜ(68) ಸಾವನ್ನಪ್ಪಿದ ಮಹಿಳೆ. ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರಬೇಕೆಂದು ಶಂಕಿಸಲಾಗಿದೆ.
ಇಂದು ಬೆಳಿಗ್ಗೆ ವಾರಿಜ ಅವರು ಮನೆಯೊಳಗೆ ಕಾಣದಾಗ ಮನೆ ಮಂದಿ ಹುಡುಕಾಡಿದ್ದು ಬಾವಿಯಲ್ಲಿ ವೃದ್ಧೆಯ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಈ ಬಗ್ಗೆ ಅವರ ಪುತ್ರ ಕಾರ್ತಿಕ್ ನೀಡಿದ ದೂರಿನಂತೆ ಉಳ್ಳಾಲ ಪೊಲೀಸರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.

Previous articleರೇಣುಕಾಸ್ವಾಮಿ ಕೊಲೆ ಪ್ರಕರಣ: ಇಬ್ಬರಿಗೆ ಜಾಮೀನು
Next articleಹಳೆಹುಬ್ಬಳ್ಳಿ ಪ್ರಕರಣ: ಬಿಜೆಪಿ ರಾಜಕೀಯ ಸರಿಯಲ್ಲ