ಬಿಎಸ್‌ಪಿ ಅಧ್ಯಕ್ಷನ ಹತ್ಯೆ: ಎಂಟು ಮಂದಿ ಶಂಕಿತರ ಬಂಧನ

0
16

ತಮಿಳುನಾಡು: ಬಹುಜನ ಸಮಾಜ ಪಕ್ಷದ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ.ಆರ್ಮ್‌ಸ್ಟ್ರಾಂಗ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಿನ್ನೆ ಸಂಜೆ ನಡೆದಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಶಂಕಿತರನ್ನು ಬಂಧಿಸಲಾಗಿದೆ.
ಶುಕ್ರವಾರ ಚೆನ್ನೈನ ಅವರ ಮನೆಯ ಸಮೀಪವೇ ಬೈಕ್‌ನಲ್ಲಿ ಬಂದ ಆರು ಮಂದಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ. ಆರ್ಮ್‌ಸ್ಟ್ರಾಂಗ್ ಅವರು ನಗರದ ಸೇಂಬಿಯಂ ಪ್ರದೇಶದಲ್ಲಿರುವ ತನ್ನ ಮನೆಯ ಬಳಿ ಬಿಎಸ್‌ಪಿಯ ಕೆಲವು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸುತ್ತಿದ್ದಾಗ ಆರು ಜನರು ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಆರ್ಮ್‌ಸ್ಟ್ರಾಂಗ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಕೊಲೆ ಪ್ರಕರಣದಲ್ಲಿ ನಾವು ಇದುವರೆಗೆ 8 ಶಂಕಿತರನ್ನು ಬಂಧಿಸಿದ್ದೇವೆ. ಇದು ಪ್ರಾಥಮಿಕ ತನಿಖೆಯಾಗಿದೆ. ಹತ್ತು ತಂಡಗಳನ್ನು ರಚಿಸಲಾಗಿದೆ. ನಾವು ಅಪರಾಧಿಗಳನ್ನು ಪತ್ತೆ ಹಚ್ಚಲಿದ್ದೇವೆ. ಈ ಶಂಕಿತರ ವಿಚಾರಣೆಯ ನಂತರ, ನಾವು ಕೊಲೆಯ ಹಿಂದಿನ ಉದ್ದೇಶವನ್ನು ಪತ್ತೆಹಚ್ಚಲಿದ್ದೇವೆ ಎಂದು ಚೆನ್ನೈನ ಹಿರಿಯ ಪೊಲೀಸ್ ಅಧಿಕಾರಿ ಆಸ್ರಾ ಗಾರ್ಗ್ ಹೇಳಿದ್ದಾರೆ.

Previous articleಕೆಎಎಸ್‌ ಪ್ರಿಲಿಮ್ಸ್‌ ಪರೀಕ್ಷೆಯ ವೇಳಾಪಟ್ಟಿ ಪ್ರಕಟ
Next articleಆರೋಗ್ಯವರ್ಧಕ ಬೆಳ್ಳುಳ್ಳಿ