ಬಿಎಸ್‌ವೈರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲಾನ್

0
35

ಶಿಗ್ಗಾವಿ: ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲಾನ್ ಮಾಡಿದ್ದರು. ಅದಕ್ಕೇ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು.‌
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಚಂದಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಗೆಲುವಿಗೆ ಪ್ರಚಾರ ಕೈಗೊಂಡು ಮಾತನಾಡಿದರು. ಮೋದಿ ಮಹಾನ್ ಸುಳ್ಳುಗಾರ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಎಂದು ದೇವೇಗೌಡರು ಹೇಳಿದ್ದರು. ಈಗ ಇಬ್ಬರೂ ಬಾಯಿ ಬಾಯಿ ಆಗಿದ್ದಾರೆ ಎಂದರು.

Previous articleಸಚಿವೆ ಹೆಬ್ಬಾಳ್ಕರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ
Next articleಎಫ್ಐಆರ್ ಬಗ್ಗೆ ಗೊತ್ತೇ ಇಲ್ಲ ಎಂದ ಡಿಕೆಶಿ