ಬಿಜೆಪಿಗೆ ಮಾಜಿ ಸಚಿವ ಎ.ಟಿ ರಾಮಸ್ವಾಮಿ ರಾಜೀನಾಮೆ

ಬೆಂಗಳೂರು: ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆ ವೇಳೆ ಜೆಡಿಎಸ್ ತೊರೆದು ಎ.ಟಿ.ರಾಮಸ್ವಾಮಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ನೀಡುವುದಾಗಿ ತಿಳಿಸಿದ್ದು, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಇನ್ಮುಂದೆ ಪರಿಸರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದಾಗಿ ತಿಳಿಸಿದ್ದಾರೆ. ಪರಿಸರ ಉಳಿಸಿದರೆ ಜೀವ ಸಂಕುಲಗಳು ಉಳಿಯುತ್ತವೆ. ತಾಪಮಾನ ಹೆಚ್ಚಲವಾಗುತ್ತಿದೆ. ಹವಾಮಾನದಲ್ಲಿ ಅಸಮತೋಲನವುಂಟಾಗಿದೆ. ನಾವು ಕುಡಿಯುವ ನೀರು, ಉಸಿರಾಡುವ ಗಾಳಿ, ಸೇವಿಸುವ ಆಹಾರವೂ ವಿಷಪೂರಿತವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಜನರಲ್ಲಿ ಜಾಗೃತಿ ಮೂಡಿಸಿ ಪರಿಸರ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ. ಈ ಸನ್ನಿವೇಶದಲ್ಲಿ ರಾಜಕಾರಣಕ್ಕಿಂತ ಪರಿಸರ ಸಂರಕ್ಷಣೆ ಮತ್ವದ್ದಾಗಿದೆ. ನನ್ನ ಪೂರ್ಣ ಸಮಯವನ್ನು ಕೃಷಿ ಜೊತೆಗೆ, ಪರಿಸರ ಸಂರಕ್ಷಣೆಯ ಕೆಲಸದಲ್ಲಿ ತೊಡಗಿಸಿಕೊಳ್ಳಲು ತೀರ್ಮಾನಿಸಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.