ಬಿಜೆಪಿಯಲ್ಲಿ ಒಡಕಿರುವುದು ನಿಜ…

0
24

ಈ ಬಗ್ಗೆ ಈಗಾಗಲೇ ಪಕ್ಷದ ಕೇಂದ್ರ ನಾಯಕರ ಗಮನಕ್ಕೂ ತರಲಾಗಿದೆ. ಶೀಘ್ರದಲ್ಲಿಯೇ ಎಲ್ಲವೂ ಸರಿಯಾಗಲಿದೆ ಎಂಬ ವಿಶ್ವಾಸವಿದೆ

ದಾವಣಗೆರೆ: ಬಿಜೆಪಿಯಲ್ಲಿ ಭಿನ್ನಾಪ್ರಾಯದಿಂದ ಒಡಕುಂಟು ಮಾಡುತ್ತಿರುವವರು ಪಕ್ಷದಲ್ಲಿ ಏನಾದರೂ ಕೊರತೆ ಇದ್ದರೆ ಪಕ್ಷದ ಹಿತದೃಷ್ಠಿ ಇಟ್ಟುಕೊಂಡು ಚರ್ಚೆಗೆ ಬನ್ನಿ, ಭಿನ್ನಾಭಿಪ್ರಾಯ ಸರಿಪಡಿಸಿ ಮುಂದೆ ಸಾಗೋಣ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭಿನ್ನಮತೀಯರಿಗೆ ಕರೆ ನೀಡಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಕೆಲವರು ಒಡಕು ಉಂಟು ಮಾಡುತ್ತಿರುವುದು ನಿಜ. ಈ ಬಗ್ಗೆ ಈಗಾಗಲೇ ಪಕ್ಷದ ಕೇಂದ್ರ ನಾಯಕರ ಗಮನಕ್ಕೂ ತರಲಾಗಿದೆ. ಶೀಘ್ರದಲ್ಲಿಯೇ ಎಲ್ಲವೂ ಸರಿಯಾಗಲಿದೆ ಎಂಬ ವಿಶ್ವಾಸವಿದೆ ಎಂದರು.

ಜೆಡಿಎಸ್ ಶಾಸಕರನ್ನ ಸೆಳೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಕೆಲವರು ಉದ್ದೇಶ ಪೂರ್ವಕವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಒಂದಾಗಿ ಮುಂದಿನ ಚುನಾವಣೆಗೆ ಹೋಗುತ್ತೇವೆ. ಒಟ್ಟಾಗಿ ಹೋದ್ರೆ ಅಧಿಕಾರಕ್ಕೆ ಬರೋದು ಕಷ್ಟ ಆಗಲ್ಲ. ಕುಮಾರಸ್ವಾಮಿ, ದೇವೇಗೌಡರು ನಾವೆಲ್ಲ ಒಂದಾಗಿದ್ದೇವೆ ಎಂದು ತಿಳಿಸಿದರು.

ಪಕ್ಷದಲ್ಲಿ ಮಾಜಿ ಶಾಸಕರು ಇದ್ದಾರೆ, ಮುಂದೆ ಗೆದ್ದು ಬಿಜೆಪಿ ಸರ್ಕಾರ ತರುವುದು ಖಚಿತ. ಈಗಿನ ವಾತಾವರಣ ನಿರೀಕ್ಷೆ ಮೀರಿ ಚೆನ್ನಾಗಿರುವುದರಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ, ಬಿಜೆಪಿಯನ್ನು ಅಧಿಕಾರಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಅದೇ ರೀತಿ ರಾಜ್ಯದ ಜನರು ಪೊಳ್ಳು ಘೋಷಣೆಗೆ ಬಲಿಯಾಗದೇ ನಮ್ಮ ಪಕ್ಷಕ್ಕೆ ಬೆಂಬಲಿಸಬೇಕು ಎಂದು ಹೇಳಿದರು.

Previous articleಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು
Next articleರಾಜ್ಯಸಭಾ ಸ್ಥಾನಗಳಿಗೆ ಉಪಚುನಾವಣೆ ದಿನಾಂಕ ಪ್ರಕಟ