ಧಾರವಾಡ: ಬಿಜೆಪಿ ಕಾರ್ಯಕರ್ತರಿಗೆ ಆದ್ಯತೆ ನೀಡುವ ಪಕ್ಷವಾಗಿದ್ದು, ನಮ್ಮ ಪಕ್ಷದಲ್ಲಿ ಕಾರ್ಯಕರ್ತರೇ ನಾಯಕರು ಎಂದು ರಾಜ್ಯಸಭಾ ಸದಸ್ಯ ಹಾಗೂ ಧಾರವಾಡ ಲೋಕಸಭಾ ಚುನಾವಣಾ ಉಸ್ತುವಾರಿ ಈರಣ್ಣ ಕಡಾಡಿ ಹೇಳಿದರು.
ಅವರು ಧಾರವಾಡದ ಶಾಸಕ ಅರವಿಂದ ಬೆಲ್ಲದ ಅವರ ಚುನಾವಣಾ ಕಚೇರಿಯಲ್ಲಿ ಗುರುವಾರ ಹು-ಧಾ ಪಶ್ಚಿಮ ವಿಧಾನಸಭಾ ಚುನಾವಣಾ ನಿರ್ವಾಹಣ ಸಮಿತಿ ಸದಸ್ಯರ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಭಾಜಪದಲ್ಲಿ ಕಾರ್ಯಕರ್ತರೇ ಪಕ್ಷದ ಬೆನ್ನೆಲಬು. ದೇಶದೆಲ್ಲೆಡೆ ಕಾರ್ಯಕರ್ತರು ಸಕ್ರಿಯರಾಗಿ ಪ್ರಚಾರ ಮಾಡಿದರೆ ನಮ್ಮ ಪಕ್ಷ 370ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದೆ. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ನಾವೆಲ್ಲರೂ ಪ್ರಯತ್ನಿಸಬೇಕು. ಮನೆ ಮನೆಗೆ ತೆರಳಿ ಪ್ರಧಾನಿ ಮೋದಿ ಅವರು ಮಾಡಿದ ಕಾರ್ಯಕ್ರಮಗಳನ್ನು ತಿಳಿಸಿಕೊಡಬೇಕು ಎಂದರು.