ಬಿಜೆಪಿಯಿಂದ ವಿಷ ಬೀಜ ಬಿತ್ತುವ ಕಾರ್ಯ

ಹುಬ್ಬಳ್ಳಿ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದಲ್ಲಿ ಉತ್ತಮ ಆಡಳಿತ ಆಡಳಿತ ನೀಡುತ್ತಿರುವುದನ್ನು ಸಹಿಸಲಾರದೆ ಬಿಜೆಪಿ ಜಾತಿ, ಧರ್ಮಗಳ ನಡುವೆ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ದೂರಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಭಾವನೆಗಳನ್ನು ಹೇಗೆ ಕೆರಳಿಸಬೇಕು ಎಂಬುದು ಬಿಜೆಪಿಯವರಿಗೆ ತಿಳಿದಿದೆ. ರಾಜ್ಯದಲ್ಲಾಗುವ ಕೋಮು ಗಲಭೆಗಳಿಗೆ ಬಿಜೆಪಿಯೇ ನೇರ ಹೊಣೆ ಹೊತ್ತು ಕೊಳ್ಳಬೇಕಾಗುತ್ತದೆ ಎಂದರು.

ತಿರುಪತಿ ಲಡ್ಡು: ಈ ವಿಚಾರದಲ್ಲಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಜಗಮೋಹನ್ ರೆಡ್ಡಿ ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಸತ್ಯಾಸತ್ಯತೆ ಗೊತ್ತಿಲ್ಲ. ಹಾಗಾಗಿ ಆ ವಿಚಾರಕ್ಕೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.