ಮಧ್ಯಪ್ರದೇಶ: ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಏಕಾಂಗಿಯಾಗಿ 370 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.
ಮಧ್ಯಪ್ರದೇಶದ ಝಬುವದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಬಳಿಕ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಇಲ್ಲಿಗೆ ಬಂದಿರುವ ಬಗ್ಗೆ ಅನೇಕ ಚರ್ಚೆಗಳು ನಡೆಯುತ್ತಿವೆ. ಆದರೆ, ನಾನು ಇಲ್ಲಿ ಚುನಾವಣಾ ಪ್ರಚಾರಕ್ಕಾಗಿ ಬಂದಿಲ್ಲ. ಜನರ ಸೇವೆ ಮಾಡಲು ಬಂದಿದ್ದೇನೆ. ಈ ಬಾರಿ ಎನ್‌ಡಿಎ 400 ಸ್ಥಾನ ದಾಟಲಿದೆ ಎಂದು ಪ್ರತಿಪಕ್ಷಗಳು ಹೇಳುತ್ತಿವೆ. ಆದರೆ, ಬಿಜೆಪಿ ಮಾತ್ರ 370 ಸೀಟು ದಾಟಲಿದೆ ಎಂದು ಮೋದಿ ಹೇಳಿದರು.