70 ಸದಸ್ಯ ಬಲದ ವಿಧಾನಸಭೆಗೆ ಫೆಬ್ರುವರಿಯಲ್ಲಿ ಚುನಾವಣೆ ನಡೆಯಲಿದೆ
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿಯಲ್ಲಿ ಚುನಾವಣೆ ನಡೆಯಲಿದ್ದು ಬಿಜೆಪಿ ಇಂದು 29 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನವದೆಹಲಿ ಕ್ಷೇತ್ರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾಜಿ ಸಂಸದ ಪರ್ವೇಶ ವರ್ಮಾ ಕಣಕ್ಕಿಳಿಯಲಿದ್ದಾರೆ. ಮುಖ್ಯಮಂತ್ರಿ ಅತಿಶಿ ವಿರುದ್ಧ ಕಾಲ್ಕಾಜಿಯಲ್ಲಿ ರಮೇಶ್ ಬಿಧುರಿ, ಹಾಗೂ ಎಎಪಿ ಮಾಜಿ ಸಚಿವ ಕೈಲಾಶ್ ಗಹ್ಲೋಟ್ ಬಿಜ್ವಾಸನ್‌ನಿಂದ ಕಣಕ್ಕಿಳಿಯಲಿದ್ದಾರೆ. ರಾಜ್ ಕುಮಾರ್ ಆನಂದ್ ಪಟೇಲ್ ನಗರದಿಂದ ಹಾಗೂ ಶಾಸಕ ಕರ್ತಾರ್ ಸಿಂಗ್ ತನ್ವಾರ್ ಛತ್ತರ್‌ಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆಸಿರುವ ಆಮ್ ಆದ್ಮಿ ಪಕ್ಷ (ಎಎಪಿ) ಎಲ್ಲ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇನ್ನು ಕಾಂಗ್ರೆಸ್ ಕೂಡ ಕೆಲವು ನಾಯಕರ ಹೆಸರನ್ನು ಕೂಡ ಪ್ರಕಟಿಸಿದೆ.



























