ಬಳ್ಳಾರಿ: ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಮುಖ್ಯ ಮಂತ್ರಿ ಸದಾನಂದಗೌಡ, ಮಾಜಿ ಸಚಿವ ಗೋವಿಂದ ಕಾರಜೋಳ, ಜನಾರ್ದನರೆಡ್ಡಿ, ಬಿ.ಶ್ರೀರಾಮುಲು, ಎನ್.ರವಿಕುಮಾರ್, ನವೀನ್ ಕುಮಾರ್ ಸೇರಿ ಜಿಲ್ಲೆಯ ಹಲವು ನಾಯಕರು ಭಾಗಿಯಾಗಲಿದ್ದಾರೆ.
ಬೃಹತ್ ಶಕ್ತಿ ಪ್ರದರ್ಶನ; ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿಯಿಂದ ಬೃಹತ್ ಶಕ್ತಿ ಪ್ರದರ್ಶನ ನಡೆಯಲಿದೆ. ಸಂಡೂರಿನ ಎಪಿಎಂಸಿ ಮೈದಾನದಿಂದ ತಾಲೂಕು ಆಡಳಿತದ ಕಚೇರಿವರೆಗೂ ರೋಡ್ ಶೋ ಆಯೋಜಿಸಲಾಗಿದೆ.
