ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ಅರೆಸ್ಟ್‌

0
21

ಬೆಳಗಾವಿ: ಅವಾಚ್ಯ ಪದ ಬಳಕೆ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿಯೇ ಹಿರೇಬಾಗೇವಾಡಿ ಪೊಲೀಸರು ಸಿ.ಟಿ. ರವಿ ಅವರನ್ನು ಬಂಧಿಸಿದ್ದಾರೆ.
ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅವಾಚ್ಯ ಶಬ್ಧ ಬಳಸಿದ್ದಾರೆ ಎಂದು ಆರೋಪಿಸಿ ಸಿ.ಟಿ. ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಮಹಿಳೆಯ ಘನತೆಗೆ ಧಕ್ಕೆ ಆರೋಪದಡಿ ಜಾಮೀನು ರಹಿತ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

Previous articleಏಕವಚನದಲ್ಲಿಯೇ ಸಿ.ಟಿ.ರವಿ ವಿರುದ್ಧ ಕೆಂಡಕಾರಿದ ಹೆಬ್ಬಾಳ್ಕರ್
Next articleಸಿ.ಟಿ. ರವಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನ