Home ತಾಜಾ ಸುದ್ದಿ ಬಿಜೆಪಿ ಒಡೆದ ಮನೆಯಾಗಿದೆ

ಬಿಜೆಪಿ ಒಡೆದ ಮನೆಯಾಗಿದೆ

0

ಹುಬ್ಬಳ್ಳಿ: ಎಚ್.ಡಿ.ಕುಮಾರಸ್ವಾಮಿ ಅವರ ಹಳೇ ಪ್ರಕರಣವನ್ನು ಮುನ್ನೆಲೆಗೆ ತಂದವರೇ ಬಿಜೆಪಿಯವರು ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕುಮಾರಸ್ವಾಮಿ ಅವರ ಹಳೇಯ ಪ್ರಕರಣವನ್ನು ಮುನ್ನೆಲೆಗೆ ತಂದವರೇ ಬಿಜೆಪಿಯವರು. ಗಣಿ ಇಲಾಖೆಯಲ್ಲಿ ಹಿಂದೆ ಹಗರಣವಾಗಿತ್ತು. ಇದೀಗ ಕೇಂದ್ರದಲ್ಲಿ ಗಣಿ ಸಚಿವರಾಗಿದ್ದಾರೆ. ಹೀಗಾಗಿ ರಾಜ್ಯಪಾಲರು ತೆಗೆದುಕೊಳ್ಳುವ ನಿರ್ಧಾರದಿಂದ ಕುಮಾರಸ್ವಾಮಿ ಅವರ ತಲೆದಂಡ ಆಗಲಿದೆ. ಇದೀಗ ಅವರ ಸಹಿ ಫೋರ್ಜರಿ ಎಂದು ಹೇಳಿತ್ತಿದ್ದಾರೆ, ಇಷ್ಟು ದಿನ ಯಾಕೆ ದೂರು ಕೊಟ್ಟಿಲ್ಲ, ಇವರು ನಮ್ಮ ಬಗ್ಗೆ, ನಮ್ಮ ಮುಖ್ಯಮಂತ್ರಿಯ ಬಗ್ಗೆ ಮಾತನಾಡುತ್ತಿರುವುದಕ್ಕೆ ನಾಚಿಕೆಯಾಗಬೇಕು. ಇಡೀ ಶಾಸಕರು ಮುಖ್ಯಮಂತ್ರಿ ಪರವಾಗಿ ನಿಂತಿದ್ದಾರೆ. ಬಿಜೆಪಿ ಒಡೆದ ಮನೆಯಾಗಿದೆ ಎಂದರು.

Exit mobile version