ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ

0
36

ಚಿಕ್ಕಮಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ತಿರುಚಲಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರೆ, ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್‌ನಲ್ಲಿ ಸಿ.ಟಿ.ರವಿ ಅವರು ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ. ರವಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಕಾಂಗ್ರೆಸ್ ಕಚೇರಿಗೆ ಪೊಲೀಸ್ ಬಿಗಿ ಬಂದೋಬಸ್ತ್ ಒದಗಿಸಿದ್ದರು. ಅಲ್ಲದೆ ಒಂದು ತಂಡವನ್ನು ಕಾಂಗ್ರೆಸ್ ಕಚೇರಿ ಎದುರು ಪೊಲೀಸರು ವಶಕ್ಕೆ ಪಡೆದರೆ, ಕೆಲವರನ್ನು ಕಾಂಗ್ರೆಸ್ ಕಚೇರಿಯಿಂದ ನೂರು ಮೀಟರ್ ದೂರದಲ್ಲೇ ಹಾಗೂ ಇನ್ನುಳಿದವರನ್ನು ಬಿಜೆಪಿ ಕಚೇರಿ ಸಮೀಪವೇ ವಶಕ್ಕೆ ಪಡೆದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಹಿರೇಮಗಳೂರು ಪುಟ್ಟಸ್ವಾಮಿ, ಕುರುವಂಗಿ ವೆಂಕಟೇಶ್, ಪುಷ್ಪರಾಜ್, ಮಧುಕುಮಾರ್ ರಾಜ್ ಅರಸ್, ಸಂತೋಷ್ ಕೋಟ್ಯಾನ್, ಅಂಕಿತಾ, ಚೈತ್ರಾ ಗೌಡ ಮತ್ತಿತರರಿದ್ದರು.

Previous articleಸಿ.ಟಿ. ರವಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನ
Next articleಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಜಗಮಗ