Home ಅಪರಾಧ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚೂರಿ ಇರಿತ: ಆರೋಪಿಗಳ ಬಂಧನಕ್ಕೆ ಆಗ್ರಹ

ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚೂರಿ ಇರಿತ: ಆರೋಪಿಗಳ ಬಂಧನಕ್ಕೆ ಆಗ್ರಹ

0

ಮಂಗಳೂರು: ವಿಜಯೋತ್ಸವದ ರ್‍ಯಾಲಿಯ ಸಂದರ್ಭದಲ್ಲಿ ಕಾಂಗ್ರೆಸಿನ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪಿಗಳನ್ನು ಬಂಧಿಸಿ, ಇಲ್ಲವಾದರೆ ಹೋರಾಟ ಹೇಗೆ ಮಾಡಬೇಕೆಂದು ನಮಗೆ ತಿಳಿದಿದೆ ಎಂದು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಬೋಳಿಯಾರ್‌ನಲ್ಲಿ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚೂರಿ ಇರಿತ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ವಿಜಯೋತ್ಸವದ ರ್‍ಯಾಲಿಯ ಸಂದರ್ಭದಲ್ಲಿ ನಮ್ಮ ಪಕ್ಷದ ಇಬ್ಬರು ಕಾರ್ಯಕರ್ತರಾದ ಹರೀಶ್ ಹಾಗೂ ವಿನೋದ್ ಅವರ ಮೇಲೆ ಕಾಂಗ್ರೆಸಿನ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ಮಾಡಿದ್ದು, ಈಗ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ನಮ್ಮ ರಾಜ್ಯ ಸರ್ಕಾರದ ಕಣ್ಣಿಗೆ ಬೀಳಲ್ಲ ! ಬಿದ್ದರೂ ಈ ಬಗ್ಗೆ ತನಿಖೆ ನಡೆಸಲ್ಲ. ಈ ಬಗ್ಗೆ ತಕ್ಷಣವೇ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಿ, ಇಲ್ಲವಾದರೆ ಹೋರಾಟ ಹೇಗೆ ಮಾಡಬೇಕೆಂದು ನಮಗೆ ತಿಳಿದಿದೆ. ನಮ್ಮ ಪಕ್ಷದ ಕಾರ್ಯಕರ್ತರಿಗೆ ನ್ಯಾಯ ಕೊಡಿ ಎಂದಿದ್ದಾರೆ.

Exit mobile version