ಪುತ್ತೂರು: ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.
ಅರುಣ್ ಕುಮಾರ್ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ಜೂ.6ರಂದು ವಿಚಾರಣೆಯನ್ನು ನಿಗಧಿಪಡಿಸಿದ್ದಾರೆ. ಈ ವಿಚಾರಣೆಗೆ ಅರುಣ್ ಕುಮಾರ್ ಪುತ್ತಿಲ ಅವರು ತಪ್ಪದೆ ಹಾಜರಾಗುವಂತೆ ಸೂಚಿಸಲಾಗಿದೆ. ಈ ಪ್ರಕರಣದಲ್ಲಿ ಅರುಣ್ ಕುಮಾರ್ ಪುತ್ತಿಲ ಅವರು ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪವಿಭಾಗದ ದಂಡಾಧಿಕಾರಿಯಾಗಿರುವ ಸಹಾಯಕ ಆಯುಕ್ತರು ಜಾರಿ ಮಾಡಿದ ನೋಟೀಸ್‌ನಲ್ಲಿ ಉಲ್ಲೇಖಿಸಲಾಗಿದೆ.
