Home ತಾಜಾ ಸುದ್ದಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಸಾಧ್ಯತೆ

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಸಾಧ್ಯತೆ

0

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಜನವರಿಯಲ್ಲಿ ಬದಲಾಗುವ ನಿರೀಕ್ಷೆ ಇದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷರು ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದರಿಂದ ರಾಷ್ಟ್ರಾಧ್ಯಕ್ಷರ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರ ಸ್ಥಾನ ಖಾಲಿಯಾಗುವ ನಿರೀಕ್ಷೆ ಇದೆ. ನಾನು ಸಹ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಹೇಳಿದರು.
ಸೊರಬ ತಾಲೂಕಿನಲ್ಲಿ ಐವರು ಬಿಜೆಪಿ ಕಾರ್ಯಕರ್ತರನ್ನು ಉಚ್ಚಾಟಿಸಿರುವ ಕ್ರಮ ಸರಿಯಲ್ಲ. ಇದನ್ನು ಜಿಲ್ಲಾ ಧ್ಯಕ್ಷರ ಮತ್ತು ರಾಜ್ಯ ಕಮಿಟಿಯ ಗಮನಕ್ಕೂ ತಂದಿರುವೆ. ಸಂಘಟನೆ ಬಲವರ್ಧನೆಗೊಳ್ಳುವ ಸಂದರ್ಭದಲ್ಲಿ ಉಚ್ಚಾಟನೆ ಸರಿಯಲ್ಲ ಎಂಬುದನ್ನು ಪ್ರಮುಖರಿಗೆ ತಿಳಿಸಿರುವೆ ಎಂದರು.

Exit mobile version