ಬಳ್ಳಾರಿ: ರಾಜ್ಯದಲ್ಲಿ ನಡೆದ ವಕ್ಫ ಆಸ್ತಿ ನೋಂದಣಿ ಪ್ರಕರಣ ವಿರೋಧಿಸಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಬಳ್ಲಾರಿಯ ರಾಯಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು, ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ರೈತರ ವ್ಯವಸಾಯ ಭೂಮಿಯನ್ನು ಇದ್ದಕ್ಕಿದ್ದಂತೆ ದಿಢೀರ್ ವಕ್ಫ ಸಂಸ್ಥೆಗೆ ಸೇರಿಸಲಾಗಿದೆ. ಕಂದಾಯ, ಪುರಾತತ್ವ, ರೈತರ ಉಳುಮೆ ಭೂಮಿ ಸೇರಿ ಸಾವಿರಾರು ಎಕರೆ ಜಮೀನನ್ನು ವಕ್ಫಗೆ ಸೇರಿಸಲಾಗಿದೆ. ಕಾಂಗ್ರೆಸ್ ನ ಈ ನೀತಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲೂ ಪ್ರತಿಭಟನೆ ಕರೆ ನೀಡಲಾಗಿದ್ದು, ಬಳ್ಳಾರಿಯಲ್ಲಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಹೋರಾಟ ನಡೆಸಲಾಗುತ್ತಿದ್ದು, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಜನಾರ್ದನರೆಡ್ಡಿ ಸೇರಿ ಹಲವು ಮುಖಂಡರು ಭಾಗವಹಿಸಲಿದ್ದಾರೆ.