ಇತ್ತೀಚೆಗೆ ಖರೀದಿಸಿದ್ದ ಮನೆಯಲ್ಲಿ ಆತ್ಮಹತ್ಯೆ ನಡೆದಿದೆ, ಮೃತನ್ನನ್ನು ಸುನೀಲ ಚವ್ಹಾಣ (25) ಎಂದು ಗುರುತಿಸಲಾಗಿದೆ
ಗದಗ: ಬಿಜೆಪಿ ಶಾಸಕರ ಮನೆಯಲ್ಲಿ ಕಾರು ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ಶಾಸಕ ಚಂದ್ರು ಲಮಾಣಿ ಅವರು ಇತ್ತೀಚೆಗೆ ಖರೀದಿಸಿದ್ದ ಮನೆಯಲ್ಲಿ ಆತ್ಮಹತ್ಯೆ ನಡೆದಿದೆ, ಮೃತನ್ನನ್ನು ಸುನೀಲ ಚವ್ಹಾಣ (25) ಎಂದು ಗುರುತಿಸಲಾಗಿದ್ದು ಶಾಸಕ ಚಂದ್ರು ಅವರ ಸಂಬಂಧಿ ಎಂದು ತಿಳಿದುಬಂದಿದೆ. ಯಾವುದೇ ಡೆತ್‌ನೋಟ್ ಸಹ ಸಿಕ್ಕಿಲ್ಲ. ಲಕ್ಷ್ಮೇಶ್ವರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.