Home ತಾಜಾ ಸುದ್ದಿ ಬಿಜೆಪಿ ಶಾಸಕ ಮುನಿರತ್ನ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚನೆ

ಬಿಜೆಪಿ ಶಾಸಕ ಮುನಿರತ್ನ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚನೆ

0

ಬೆಂಗಳೂರು: ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಬಿ.ಕೆ ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿ.ಐ.ಡಿ. ಆರ್ಥಿಕ ಅಪರಾಧ ವಿಭಾಗದ ಅಪರ ಪೊಲೀಸ್ ಮಹಾ ನಿರ್ದೇಶಕ( ಎಡಿಜಿಪಿ)ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ ಐಟಿಯನ್ನು ಸರ್ಕಾರ ರಚಿಸಿದೆ. ಮುನಿರತ್ನ ವಿರುದ್ಧ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಕ್ರಿಮಿನಲ್ ಪ್ರಕರಣ ಮತ್ತು ರಾಮನಗರ ಜಿಲ್ಲೆಯ ಕಗ್ಗಲೀಪುರದಲ್ಲಿ ದಾಖಲಾಗಿರುವ ಮೊಕದ್ದಮೆಗೆ ಸಂಬಂಧಿಸಿದಂತೆ ಸಿಐಡಿಯ ವಿಶೇಷ ಎಸ್‌ಐಟಿ ತಂಡಕ್ಕೆ ತನಿಖೆಯ ಜವಾಬ್ದಾರಿಯನ್ನು ವಹಿಸಲಾಗಿದೆ.

Exit mobile version