ಬೆಂಗಳೂರು: ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿರುವ ಆರೋಪ ಎದುರಿಸುತ್ತಿರುವ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋಲಾರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಮುನಿರತ್ನ ವಿರುದ್ಧ ಎರಡು ಎಫ್.ಐ.ಆರ್. ದಾಖಲಾಗಿವೆ.ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿರುವ ಆರೋಪದಲ್ಲಿ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಜೀವ ಬೆದರಿಕೆ ಪ್ರಕರಣ ದಾಖಲಾಗಿತ್ತು.























