Home ನಮ್ಮ ಜಿಲ್ಲೆ ಉತ್ತರ ಕನ್ನಡ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ

ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ

0

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ಜಿಲ್ಲಾ ಕೈ ನಾಯಕರ ಸಮ್ಮುಖದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪುತ್ರ ವಿವೇಕ ಹೆಬ್ಬಾರ್ ಹಾಗೂ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ, ಬನವಾಸಿ ಬ್ಲಾಕ್ ಸಂಯುಕ್ತಾಶ್ರಯದಲ್ಲಿ ಕಾರ್ಯಕರ್ತರ ಸಮಾವೇಶ ಹಾಗೂ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ವಿವೇಕ ಹೆಬ್ಬಾರ್ ಸೇರ್ಪಡೆಯಾದರು. ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿನಾಥ ಗಾಂವಕರ ಅವರು ಹೆಬ್ಬಾರ್ ಅವರಿಗೆ ಕಾಂಗ್ರೆಸ್ ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿದರು.

ಯಲ್ಲಾಪುರ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ 2023ರ ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಹಲವು ಸಭೆಗಳನ್ನೂ ನಡೆಸಿದ್ದ ಹೆಬ್ಬಾರ್, ರಾಜ್ಯಸಭಾ ಚುನಾವಣೆ ವೇಳೆ ಮತದಾನ ಮಾಡದೇ ಉಳಿದಿದ್ದರು.

Exit mobile version