ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆಸ್ಪತ್ರೆಗೆ ದಾಖಲು

0
18

ಬೆಳಗಾವಿ: ವಿಜಯಪುರದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯ ಏರು ಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಿದುಳಿನ ರಕ್ತಸ್ರಾವದ ಹಿನ್ನೆಲೆಯಲ್ಲಿ ಬೆಳಗಾವಿ ಕೆಎಲ್‌ಇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಕಳೆದ ಜನವರಿ 28ರಂದು ಸಹ ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಉಸಿರಾಟ ಸಮಸ್ಯೆಯಾಗಿ ಅವರನ್ನು ಬಾಗಲಕೋಟೆ ‌ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮತ್ತೆ ರಮೇಶ್ ಜಿಗಜಿಣಗಿಗೆ ಮತ್ತೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ನಿನ್ನೆ ತಡ ರಾತ್ರಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ.

Previous articleಪೂರ್ವ ತಯಾರಿ ಇಲ್ದೇ ಮಾಡಿದ್ದಾರೆ ಜಾತಿ ಗಣತಿ
Next articleಈಗಲಾದರೂ ನಿಮ್ಮ ಬಾಂಧವರನ್ನು ಬಂಧಿಸುತ್ತೀರಾ ?