ಕೊಪ್ಪಳ: ನಮ್ಮ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಗಳು ತಯಾರಾಗುತ್ತಿದೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಬಿಜೆಪಿ ಸರ್ಕಾರವಿದ್ದಾಗ ಆರ್.ಎಸ್.ಎಸ್ ಕಚೇರಿ ಕೇಶವ ಕೃಪಾದಲ್ಲಿ ಪತ್ರಗಳು ತಯಾರಾಗುತ್ತಿದ್ದವೇ ಎಂದು ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಡಿಜಿಪಿ ಚಂದ್ರಶೇಖರ್ ಕೇಂದ್ರ ಸಚಿವ ಕುಮಾರಸ್ವಾಮಿಗೆ ಬರೆದ ಪತ್ರ ಕಾಂಗ್ರೆಸ್ ಕಚೇರಿಯಲ್ಲಿ ತಯಾರಾಗಿದೆ ಎಂದ ಪ್ರಹ್ಲಾದ್ ಜೋಶಿ ಕೇಂದ್ರ ಸಚಿವರಾಗಿದ್ದು, ಸೂಕ್ತವಾಗಿ ಮಾತನಾಡಬೇಕು ಎಂದು ತಿರುಗೇಟು ನೀಡಿದರು.