ಬಿಲ್ಕಿಸ್ ಬಾನೋ ಪ್ರಕರಣ: ಸರಕಾರದ ಆದೇಶ ರದ್ದು ಮಾಡಿದ ಸುಪ್ರೀಂ ಕೋರ್ಟ್

0
20

ಹೊಸದಿಲ್ಲಿ: ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಭಾಗಿಯಾಗಿದ್ದ ಅಪರಾಧಿಗಳ ಅವಧಿಗೆ ಮುನ್ನ ಬಿಡುಗಡೆಗೆ ಅವಕಾಶ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.
ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಹನ್ನೊಂದು ಅಪರಾಧಿಗಳು ಎರಡು ವಾರಗಳಲ್ಲಿ ಜೈಲು ಅಧಿಕಾರಿಗಳಿಗೆ ವರದಿ ಸಲ್ಲಿಸಬೇಕು ಮತ್ತು ಜೈಲಿನಲ್ಲಿಯೇ ಮುಂದುವರಿಯಬೇಕು ಎಂದು ಹೇಳಿದೆ.

ಗುಜುರಾತ್ ಗಲಭೆಯ ಸಮಯದಲ್ಲಿ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಅಪರಾಧಿಗಳು ಹತ್ಯೆ ಮಾಡಿದ್ದರು. ಪ್ರಕರಣದ ಆರೋಪಿಗಳನ್ನು ಜೀವಾವಧಿ ಶಿಕ್ಷೆಯ ಅವಧಿಗೂ ಮುನ್ನವೇ ರಾಜ್ಯ ಸರ್ಕಾರವು ಸನ್ನಡತೆ ಆಧಾರದ ಮೇಲೆ ಬಿಡುಗಡೆಗೊಳಿಸಿತ್ತು.

Previous articleಯಶ್ ಕಟೌಟ್‍ ದುರಂತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ
Next articleಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಲಕ್ಷ್ಮೇಶ್ವರಕ್ಕೆ ತೆರಳಿದ ನಟ ಯಶ್