ಶಿವಮೊಗ್ಗ: ನಗರದ ಗಾಂಧಿ ಬಜಾರನಲ್ಲಿರುವ ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಗಾಂಧಿ ಬಜಾರ್ ನಲ್ಲಿರುವ ಬಸವೇಶ್ವರ ದೇವಸ್ಥಾನದ ಹಿಂಭಾಗದ ಬಟ್ಟೆ ಮಾರುಕಟ್ಟೆಯ ಸುಮಾರು ಏಳೆಂಟು ಅಂಗಡಿಗಳಿಗೆ ಬೆಂಕಿ ಆವರಿಸಿದ್ದು, ಒಳಗಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನೆಯ ಹಿನ್ನೆಲೆಯಲ್ಲಿ ಬಟ್ಟೆ ಮಾರುಕಟ್ಟೆ ಭಾಗದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿತ್ತು. ಸುಮಾರು 8ಕ್ಕೂ ಅಧಿಕ ಅಂಗಡಿಗಳ ಒಳಗಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಇನ್ನು ಸ್ಥಳಕ್ಕೆ ಅಗ್ನಿ ಅವಘಡ ಸಂಭವಿಸಿದ ಸ್ಥಳಕ್ಕೆ ಪಾಲಿಕೆ ಆಯುಕ್ತ ಕವಿತಾ ಯೋಗಪ್ಪನವರ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.