ಕುಷ್ಟಗಿ: ಮನೆಯಲ್ಲಿ ಯುವಕನೊಬ್ಬನನ್ನು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಸೋಮವಾರ ತಾಲೂಕಿನ ಹಿರೇಮನ್ನಾಪುರ ಗ್ರಾಮದಲ್ಲಿ ನಡೆದಿದೆ.
ಶರಣಪ್ಪ ಶಿವಪ್ಪ ಮಸ್ಕಿ(೨೨) ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಯುವಕನು ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ಗಾರಿ ಕೆಲಸ ಮಾಡುತ್ತಿದ್ದ. ಕಳೆದ ಒಂದೆರೆಡು ತಿಂಗಳ ಹಿಂದೆ ಸ್ವಗ್ರಾಮದಲ್ಲಿ ತಮ್ಮ ಮನೆಯಲ್ಲಿ ಒಬ್ಬನೇ ವಾಸವಾಗಿದ್ದ ಎನ್ನಲಾಗಿದೆ. ಕೊಲೆಯಾದ ಯುವಕನ ತಂದೆ ಶಿವಪ್ಪ ಮಸ್ಕಿ ಕುಷ್ಟಗಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ

























