ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಶುರುವಾಗಿದ್ದು, ಭಾರಿ, ಗಾಳಿ ಮಳೆಯಿಂದಾಗಿ ಆಟೋದ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕತ್ರಿಗುಪ್ಪೆಯ ಎಂ.ಎಂ. ಬಾರ್ ಬಳಿ ಘಟನೆ ನಡೆದಿದ್ದು, ಘಟನೆಯಲ್ಲಿ ಆಟೋ ಚಾಲಕ ಮಹೇಶ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅದೃಷ್ಟವಶಾತ್, ಆ ಸಂದರ್ಭದಲ್ಲಿ ಆಟೋದಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ.
ರಿಚ್ಮಂಡ್ ಟೌನ್, ಶಾಂತಿನಗರ, ಕಾರ್ಪೊರೇಷನ್, ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ರಾಜಾಜಿನಗರ, ಬಸವೇಶ್ವರ ನಗರ, ನಂದಿನಿ ಲೇಔಟ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದ್ದು, ಜನರು ಪರದಾಡುವಂತಾಗಿದೆ. ಬೆಂಗಳೂರಿನಲ್ಲಿ ಮುಂದಿನ 3 ಗಂಟೆಗಳ ಕಾಲ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 40-60 ಕಿಮೀ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.