ಬೆಂಗಳೂರಿನ ಜನತೆಗೆ ಅಭಿನಂದನೆ ಸಲ್ಲಿಸಿದ ಮೋದಿ

0
7

ನವದೆಹಲಿ: ರೋಮಾಂಚಕ ನಗರವಾದ ಬೆಂಗಳೂರಿನ ಹೆಬ್ಬಾಗಿಲು ಮಾತ್ರವಲ್ಲದೆ ವಾಸ್ತುಶಿಲ್ಪದ ವೈಭವದ ಪ್ರದರ್ಶನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಳೆದ ವರ್ಷ ಟರ್ಮಿನಲ್ ಕಟ್ಟಡದ ಉದ್ಘಾಟನೆಯ ಝಲಕ್‌ನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಪೋಸ್ಟ್‌ ಮಾಡಿರುವ ಅವರು “ಶ್ಲಾಘನೀಯ ಸಾಧನೆ! ಬೆಂಗಳೂರಿನ ಜನತೆಗೆ ಅಭಿನಂದನೆಗಳು. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಕೇವಲ ರೋಮಾಂಚಕ ನಗರವಾದ ಬೆಂಗಳೂರಿನ ಹೆಬ್ಬಾಗಿಲು ಮಾತ್ರವಲ್ಲದೆ ವಾಸ್ತುಶಿಲ್ಪದ ವೈಭವದ ಪ್ರದರ್ಶನವಾಗಿದೆ. ಈ ಸಾಧನೆಯು ವಿಶ್ವ ದರ್ಜೆಯ ಮೂಲಸೌಕರ್ಯವನ್ನು ಕಲಾತ್ಮಕ ಸೌಂದರ್ಯದೊಂದಿಗೆ ಸಂಯೋಜಿಸುವಲ್ಲಿ ದೇಶದ ಬೆಳೆಯುತ್ತಿರುವ ಪರಾಕ್ರಮವನ್ನು ಪ್ರತಿಬಿಂಬಿಸುತ್ತದೆ ಎಂದು ಬರೆದು ಕೊಂಡಿದ್ದಾರೆ.

Previous articleರಾಜಕೀಯ ಲಾಭಕ್ಕಾಗಿ ಹಿಜಾಬ್ ಪ್ರಸ್ತಾಪ
Next articleಸಿದ್ದರಾಮಯ್ಯ ೨ನೇ ಟಿಪ್ಪು