ಬೆಂಗಳೂರಿನ ರೈಲ್ವೆ ತರಬೇತಿ ಕೇಂದ್ರಕ್ಕೆ ಸಚಿವ ಅಶ್ವಿನಿ ವೈಷ್ಣವ್‌ ಭೇಟಿ

0
39

ಬೆಂಗಳೂರು: ಬೆಂಗಳೂರಿನ ರೈಲ್ವೆ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದ ‌ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ, ಮಾಹಿತಿ ತಂತ್ರಜ್ಞಾನ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು
ತರಬೇತಿ ಪಡೆಯುತ್ತಿರುವ ವಿವಿಧ ರೈಲ್ವೆ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು.
ಬಳಿಕ ಅಶ್ವಿನಿ ವೈಷ್ಣವ್, ಟ್ರ್ಯಾಕ್‌ಮೆನ್ ಲೋಕೋ ಪೈಲಟ್ ಸೇರಿದಂತೆ ವಿವಿಧ ಸಿಬ್ಬಂದಿಯ ಜೊತೆ ಸಮಾಲೋಚನೆ ನಡೆಸಿದರು. ಈ ವೇಳೆ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ರಾಜ್ಯ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ, ರೈಲ್ವೆ ಇಲಾಖೆಯಲ್ಲಿ ನಡೆಯಲಿರುವ ಪರೀಕ್ಷೆಯನ್ನು ಕನ್ನಡದಲ್ಲೇ ಬರೆಯಲು ಸಚಿವರು ಅವಕಾಶ ನೀಡಿದ್ದಾರೆ. ಅದೇ ರೀತಿ ಇಲಾಖೆಯ ಬಡ್ತಿಗಾಗಿ ನಡೆಯುವ ಪರೀಕ್ಷೆಯೂ ಕನ್ನಡದಲ್ಲೇ ಇರಬೇಕು ಎನ್ನುವುದಕ್ಕೆ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿಸಿದರು.

Previous articleಬೈಕ್ ಅಪಘಾತ: ಇಬ್ಬರು ಸಾವು
Next articleಸುಪ್ರೀಂ ಕೋರ್ಟ್‌ನ ಧ್ವಜ, ಲಾಂಛನ ಅನಾವರಣ