ಬೆಂಗಳೂರು ಕಟ್ಟಡ ದುರಂತ: ಪರಿಹಾರ ಘೋಷಿಸಿದ ಪ್ರಧಾನಿ

0
17

ಬೆಂಗಳೂರು: ಬೆಂಗಳೂರಿನ ಬಾಬುಸಾಬ್​ ​ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳ ನೆರವಿಗೆ ಪ್ರಧಾನಿ ನರೇಂದ್ರ ಮೋದಿ ಧಾವಿಸಿದ್ದು, ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಕಾರ್ಯಾಲಯ ಸಂದೇಶ ಪೋಸ್ಟ್‌ ಮಾಡಿದೆ. ಮೃತ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ, ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದ್ದು, ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗುತ್ತದೆ. ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮೃತ ಕಾರ್ಮಿಕರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿ ಎಂದಿದ್ದಾರೆ. ಜತೆಗೆ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

Previous articleಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಇಂದು ನಾಮಪತ್ರ ಸಲ್ಲಿಕೆ
Next articleಕೇಂದ್ರ ಸರಕಾರ ಸ್ವಾತಂತ್ರ್ಯ ಹೋರಾಟಗಾರರನ್ನು ಪ್ರತೀಬಾರಿ ಗೌರವಿಸುತ್ತಾ ಬಂದಿದೆ