ಬೆಂಗಳೂರು: ಆರ್ ಸಿ ಬಿ ತಂಡದ ವಿಜಯೋತ್ಸವದ ಸಂದರ್ಭ ಕಾಲ್ತುಳಿತ ಹಾಗೂ 11 ಜನರ ಸಾವಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಘಟನೆ ಬಗ್ಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದ್ದು, ಮಧ್ಯಾಹ್ನ 2.30 ಕ್ಕೆ ವಿಚಾರಣೆ ನಿಗದಿಪಡಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳ ಸಮ್ಮುಖದಲ್ಲಿ ವಿಚಾರಣೆ ನಡೆಯಲಿದ್ದು, ಅಡ್ವೊಕೇಟ್ ಜನರಲ್ ಮೂಲಕ ಸರ್ಕಾರ ನ್ಯಾಯಾಲಯಕ್ಕೆ ಸಂಪೂರ್ಣ ವಿವರ ನೀಡಬೇಕಿದೆ.