‘ಬೆಂಗಳೂರು ಟೆಕ್‌ ಸಮಿಟ್‌’ಗೆ ಇಂದು ಚಾಲನೆ

0
22

ಬೆಂಗಳೂರು: ಸಾಫ್ಟ್‌ವೇರ್‌ ಟೆಕ್ನಾಲಜಿ ಪಾರ್ಕ್ಸ್‌ ಆಫ್‌ ಇಂಡಿಯಾ (ಎಸ್‌ಟಿಪಿಐ) 27ನೇ ಆವೃತ್ತಿಯ ಬೆಂಗಳೂರು ಟೆಕ್‌ ಶೃಂಗಸಭೆಯನ್ನು ಇಂದಿನಿಂದ 21ರವರೆಗೆ ನಡೆಯಲಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದು, ʼಅನಿಯಮಿತʼ ಎಂಬ ಪರಿಕಲ್ಪನೆ ಅಡಿಯಲ್ಲಿ ಟೆಕ್‌ ಶೃಂಗಸಭೆ ಆಯೋಜಿಸಲಾಗಿದೆ. ಸ್ಟಾರ್ಟ್‌ಅಪ್‌ಗಳ ಸರ್ವತೋಮುಖ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಜಾಗತಿಕ ಪಾಲುದಾರಿಕೆಗೆ ಆದ್ಯತೆ ನೀಡಲಾಗುತ್ತಿದೆ. ತಾಂತ್ರಿಕ ಉತ್ಕೃಷ್ಟತೆ, ನಾವೀನ್ಯತೆ ಮತ್ತು ಬೆಳವಣಿಗೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲೊದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಚಾಲನೆ ನೀಡಲಿದ್ದಾರೆ .

Previous articleಶಬರಿಮಲೆ: ಕರ್ನಾಟಕ ಯಾತ್ರಿಕರ ಬಸ್ ಪಲ್ಟಿ
Next articleವಾಹನಗಳ ಮೇಲೆ ಕಲ್ಲು ತೂರಿ ದರೋಡೆಗೆ ಯತ್ನ