Home ತಾಜಾ ಸುದ್ದಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ

0

ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ಹಲವೆಡೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಂಗಳೂರು ನಗರ ಯೋಜನಾ ಇಲಾಖೆಯ ನಿರ್ದೇಶಕ ಎನ್.ಕೆ.ತಿಪ್ಪೇಸ್ವಾಮಿ ಅವರ ಬನಶಂಕರಿಯ 1ನೇ ಹಂತದಲ್ಲಿರುವ ನಿವಾಸ, ಅಬಕಾರಿ ಇಲಾಖೆಯ ಅಧೀಕ್ಷಕ ಮೋಹನ್.ಕೆ. ಅವರ ಕನಕಪುರ ರಸ್ತೆಯಲ್ಲಿರುವ ನಿವಾಸ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್​ ಅವರ ಮಂಡ್ಯದ ನಿವಾಸ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಎಂ.ಸಿ.ಕೃಷ್ಣವೇಣಿ ಅವರ ಚಿಕ್ಕಬಳ್ಳಾಪುರದ ನಿವಾಸಗಳಲ್ಲಿ ಶೋಧ ನಡೆಯುತ್ತಿದೆ. ಬೆಂಗಳೂರು, ಮಂಗಳೂರು, ಮಂಡ್ಯ ಸೇರಿದಂತೆ 7 ಕಡೆಗಳಲ್ಲಿ ದಾಳಿ ನಡೆಸಲಾಗಿದೆ.
ಮಂಗಳೂರು ಹಾಗೂ ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳ ತಂಡ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ. ಮಂಡ್ಯದಲ್ಲಿ ‌ಲೋಕಾಯುಕ್ತ ಎಸ್​ಪಿ ಸುರೇಶ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಮನೆಗಳ ಮೇಲೆ ದಾಳಿ ಮಾಡಲಾಗಿದೆ.

Exit mobile version