Home ತಾಜಾ ಸುದ್ದಿ ಬೆಲೆ ಏರಿಕೆ ರಾಜಕೀಯವಾಗಿ ಬಳಸಿಕೊಳ್ಳಬಾರದು

ಬೆಲೆ ಏರಿಕೆ ರಾಜಕೀಯವಾಗಿ ಬಳಸಿಕೊಳ್ಳಬಾರದು

0

ಬೆಳಗಾವಿ: ಬಿಜೆಪಿ ಆಡಳಿತ ಅವಧಿಯಲ್ಲಿಯೂ ಬೆಲೆ ಏರಿಕೆ ಆಗಿವೆ. ಅನಾವಶ್ಯಕವಾಗಿ ಪ್ರತಿಭಟನೆ ಅಗತ್ಯವಿಲ್ಲ. ಅದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಬಿಜೆಪಿಗೆ ಕುಟುಕಿದರು.
ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಮಾಧ್ಯಮಗಾರರೊಂದಿಗೆ ಮಂಗಳವಾರ ಮಾತನಾಡಿದ ಸಚಿವರು, ಬೆಲೆ ಏರಿಕೆ ವಿಷಯ ಆಯಾ ಇಲಾಖೆಗಳು ಸ್ಪಷ್ಪನೆ ನೀಡಬೇಕಿದೆ. ಬೆಲೆ ಏರಿಕೆ ಬಗ್ಗೆ ಚರ್ಚಿಸಿ ವೈಜ್ಞಾನಿಕ ಮಾರ್ಗ ಕಂಡುಕೊಳ್ಳುವ ಬದಲು ಪ್ರತಿಭಟನೆ ನಡೆಸುವುದು ಅನಾವಶ್ಯಕ ಎಂದು ಅಭಿಪ್ರಾಯಪಟ್ಟರು.

Exit mobile version