ಬೆಳಗಾವಿಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ

ಬೆಳಗಾವಿ: ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಗೆ ಸಂಬಂದಿಸದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ನಗರದಲ್ಲಿ ಒಂದು ತಿಂಗಳ ಅವಧಿಯಲ್ಲಿ ಸಾಮೂಹಿಕ ಅತ್ಯಾಚಾರದ ಎರಡನೇ ಪ್ರಕರಣ ದಾಖಲಾಗಿದ್ದು, ಆರು ಜನ ಸೇರಿಕೊಂಡು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಹಿನ್ನಲೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಬೆಳಗಾವಿ ತಾಲೂಕಿನ ಹೊರವಲಯದಲ್ಲಿರುವ ಗುಡ್ಡಗಾಡಿನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಲಾಗಿದೆ,ಬಳಿಕ ಲೈಂಗಿಕ ದೌರ್ಜನ್ಯದ ದೃಶ್ಯ ಸೆರೆಹಿಡಿದು ಬ್ಲ್ಯಾಕ್ ಮೇಲೆ ಮಾಡಿ ನಿರಂತರ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ವಿಷಯ ಬಾಲಕಿ ಪೋಷಕರಿಗೆ ಗೊತ್ತಾಗುತ್ತಿದ್ದಂತೆ ಪೊಲೀಸರಿಗೆ ದೂರು ನೀಡಲಾಗಿದೆ. ಪೋಷಕರ ದೂರಿನ ಅನ್ವಯ ಓರ್ವ ಆರೋಪಿ ಬಂಧಿಸಿ ವಿಚಾರಣೆ ನಡೆಸಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಪೋಲೀಸರು ಜಾಲ ಬೀಸಿದ್ದಾರೆ. ಎಪಿಎಂಸಿ ಪೊಲೀಸ ಠಾಣೆಯಲ್ಲಿ ಪೋಸ್ಕೋ ಪ್ರಕರಣ
ದಾಖಲಾಗಿದೆ.