ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅಟ್ಟಹಾಸ: ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೇಲೆ ಹಲ್ಲೆ​

0
37

ಬೆಳಗಾವಿ: ನಗರದಲ್ಲಿ ಎಂಇಎಸ್ ಪುಂಡರ ಹಾವಳಿ ಮತ್ತೆ ಮುಂದುವರಿದಿದ್ದು. ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಎಂದು ಕನ್ನಡಿಗ ಕಾರ್ಯದರ್ಶಿ ಮೇಲೆ ರಾಡ್‌ನಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಬೆಳಗಾವಿ ತಾಲೂಕಿನ ಗೋಜಗಾ ಸಮೀಪ ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ಅಂಬೇವಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚೇತನ್ ಪಾಟೀಲ್, ಹಾಲಿ ಅಧ್ಯಕ್ಷರ ಪುತ್ರ ವಿಕ್ರಮ್ ಯಳ್ಳೂರಕರ್ ಅವರ ಗ್ಯಾಂಗ್ ಹಲ್ಲೆ ಮಾಡಿದೆ ಎನ್ನಲಾಗಿದೆ.
ಅಂಬೇವಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ನಾಗಪ್ಪ ಎಂಬವರ ಮೇಲೆ, ತಾವು ಹೇಳಿದ ಕೆಲಸ ಮಾಡಿಲ್ಲ ಎಂಬ ಕಾರಣಕ್ಕೆ ಎಂಇಎಸ್ ಪುಂಡರು ದಾಳಿ ನಡೆಸಿದ್ದಾರೆ. ಅಲ್ಲದೆ ನಾವು ಹೇಳಿದ ಹಾಗೆ ನೀವು ಕೆಲಸ ಮಾಡಬೇಕು. ಇಲ್ಲದಿದ್ದರೆ ಲಂಚ ಪಡೆದಿದ್ದೀಯಾ ಎಂಬುದಾಗಿ ಕೇಸ್ ಹಾಕುತ್ತೇವೆ’ ಎಂದು ಹಲ್ಲೆಕೋರರು ಧಮ್ಕಿ ಹಾಕಿದ್ದಾರೆ. ಚೇತನ್ ಪಾಟೀಲ್, ವಿಕ್ರಮ್ ಯಳ್ಳೂರಕರ್ ಅವರ ಗ್ಯಾಂಗ್ ಮತ್ತು ಎಂಇಎಸ್​ ಪುಂಡರು ಜತೆಯಾಗಿ ಹಲ್ಲೆ ಮಾಡಿದ್ದಾರೆ. ಚೇತನ್ ಪಾಟೀಲ್ ಎಂಇಎಸ್ ಜಿಲ್ಲಾ ಸಂಚಾಲಕರೂ ಆಗಿದ್ದಾರೆ. ಗಾಯಾಳು ನಾಗಪ್ಪ ಅವರನ್ನು ಸದ್ಯ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Previous articleಒಂದರಿಂದಲೇ ಎರಡು ಫಲ
Next articleಹಕ್ಕುಗಳು ಕಾರ್ಯಗತವಾಗದೆ, ಕೇವಲ ಕಾಗದದ ಮೇಲೆ ಉಳಿದರೆ ಅಭಿವೃದ್ಧಿ ಸಾಧ್ಯವಿಲ್ಲ