Home News ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ

ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ

ಬೆಳಗಾವಿ: ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ನಗರದಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ ನಡೆಸಿದ್ದಾರೆ.
ಬೆಳಗಾವಿ ನಗರದ ಅನಗೋಳದಲ್ಲಿರುವ, ಬೆಳಗಾವಿ ಪ್ರಭಾರಿ ಸಬ್ ರಿಜಿಸ್ಟರ್ ಸಚಿನ್ ಮಂಡೇದ್ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮನೆ, ಕಚೇರಿ ಸೇರಿ 3 ಕಡೆಗಳಲ್ಲಿ ದಾಳಿ ನಡೆಸಲಾಗಿದೆ.
ಹಾರೂಗೇರಿ ವೆಟರ್ನರಿ ಇನ್ಸ್​​ಪೆಕ್ಟರ್​​ ಸಂಜಯ್ ಮನೆ ಮೇಲೂ ದಾಳಿ ನಡೆದಿದೆ. ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Exit mobile version