SK Home Ad
Home ಸುದ್ದಿ ದೇಶ ಬೆಳಗಾವಿಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ ಭೂಮಿ ರಾಜ್ಯಕ್ಕೆ ಹಸ್ತಾಂತರಿಸಲು ಮನವಿ

ಬೆಳಗಾವಿಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ ಭೂಮಿ ರಾಜ್ಯಕ್ಕೆ ಹಸ್ತಾಂತರಿಸಲು ಮನವಿ

0
207
BOMMAI

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ರಾಜ್ಯ ಸರ್ಕಾರಕ್ಕೆ ಸೇರಿದ ಬೆಳಗಾವಿ ಜಿಲ್ಲೆ ತುಕಮಟ್ಟಿ ಗ್ರಾಮದ 732.24 ಎಕರೆ ಪ್ರದೇಶವು ರಕ್ಷಣಾ ಪ್ರಾಧಿಕಾರದ ವಶದಲ್ಲಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿಯ ದೃಷ್ಟಿಯಿಂದ ಈ ಭೂ ಪ್ರದೇಶವನ್ನು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲು ರಕ್ಷಣಾ ಪ್ರಾಧಿಕಾರಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೇಂದ್ರ ರಕ್ಷಣಾ ಸಚಿವರನ್ನು ಕೋರಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಜಲಸಂಪನ್ಮೂಲ ಮತ್ತು ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು.