ಬೆಳಗಾವಿ ಜನತೆಗೆ ಗುಡ್‌ನ್ಯೂಸ್‌

0
43

ಶೀಘ್ರ ಬೆಳಗಾವಿ-ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ

ಬೆಂಗಳೂರು: ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್ ರೈಲು ಬೆಳಗಾವಿಯವರೆಗೆ ವಿಸ್ತರಿಸುವ ಬೇಡಿಕೆಯನ್ನು ಪರಿಶೀಲಿಸಿ ಇನ್ನು ಬೆಳಗಾವಿಯಿಂದ ನೂತನ ವಂದೇ ಭಾರತ್ ರೈಲು ಸಂಚಾರಕ್ಕೆ ಕೇಂದ್ರ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಪತ್ರ ಹಂಚಿಕೊಂಡು ಪೋಸ್ಟ್‌ ಮಾಡಿದ್ದಾರೆ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲಿಗೆ ನನ್ನ ಕೋರಿಕೆಯ ಮೇರಿಗೆ ಅನುಮೋದನೆ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ವಂದೇ ಭಾರತ್ ರೈಲು ಸಂಪರ್ಕದಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ದೊಡ್ಡ ಉತ್ತೇಜನ ಸಿಗಲಿದೆ ಎಂದಿದ್ದಾರೆ.

Previous articleತಾಯಿ-ಮಗ ಇಬ್ಬರು ನಾಪತ್ತೆ
Next articleಪರೀಕ್ಷೆಯ ಅನ್ಯಾಯ ಸರಿಪಡಿಸುವಂತೆ ಸಿಎಂಗೆ ಪತ್ರ ಬರೆದ ತೇಜಸ್ವಿ