ಬೆಂಗಳೂರು: ಬೆಳಗಾವಿ ಪ್ರಯಾಣಿಕರಿಗೆ ಸಿಹಿ ಸುದ್ದಿಯನ್ನು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಬೆಳಗಾವಿ – ಮೀರಜ್ ಪ್ಯಾಸೆಂಜರ್ ವಿಶೇಷ ರೈಲಿನ ಸೇವೆಯನ್ನು ನವೆಂಬರ್ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಸಾರ್ವಜನಿಕರು ಈ ವಿಶೇಷ ರೈಲಿನ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿದ್ದಾರೆ.